alex Certify ಹುಟ್ಟುಹಬ್ಬದ ನೆಪದಲ್ಲಿ ಹೋಟೆಲ್ ಗೆ ಕರೆದು ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ನೆಪದಲ್ಲಿ ಹೋಟೆಲ್ ಗೆ ಕರೆದು ಅತ್ಯಾಚಾರ

ಮೀರತ್: ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಯುವಕನ ವಿರುದ್ಧ ಬಾಲಕಿ ಕುಟುಂಬದವರು ದೂರು ನೀಡಿದ್ದಾರೆ.

ಮೀರತ್ ನ ಮೆಡಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು, ಆರೋಪಿಗಳನ್ನು ಈಗ ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದೆ.

ಆದರೆ, ಬಂಧಿತ ಯುವಕನ ಪೋಷಕರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಆಧಾರ ರಹಿತ ಆರೋಪ ಇದಾಗಿದ್ದು, ಯುವಕನನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ದೇವೇಶ್ ಸಿಂಗ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...