ಆಸ್ಪತ್ರೆಗೆ ಬಂದ ರೋಗಿಗಳಿಗೆಲ್ಲಾ ಒಂದೇ ಸಿರಿಂಜ್ ನಲ್ಲಿ ಇಂಜೆಕ್ಷನ್ ನೀಡಿದ ವೈದ್ಯ: ಮಗುವಿಗೆ HIV ಪಾಸಿಟಿವ್

ನವದೆಹಲಿ: ಆಸ್ಪತ್ರೆಗೆ ಬಂದ ಅನೇಕ ರೋಗಿಗಳಿಗೆ ಒಂದೇ ಸಿರಿಂಜ್ ಬಳಸಿದ ಪರಿಣಾಮ ಹೆಣ್ಣು ಮಗುವಿಗೆ ಹೆಚ್‌ಐವಿ ಸೋಂಕು ತಗುಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇಟಾಹ್‌ ನ ರಾಣಿ ಅವಂತಿ ಬಾಯಿ ಲೋಧಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಂದ ವಿವರಣೆ ಕೇಳಲಾಗಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಟಾಹ್‌ನ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು ಒಂದೇ ಸಿರಿಂಜ್‌ನಿಂದ ಹಲವಾರು ರೋಗಿಗಳಿಗೆ ಚುಚ್ಚುಮದ್ದು ಮಾಡಿದ ಘಟನೆಯ ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳಲಾಗಿದೆ. ಮಗುವಿನ ಪರೀಕ್ಷೆಯ ವರದಿಯನ್ನು ಹೆಚ್‌ಐವಿ ಪಾಸಿಟಿವ್ ಎಂದು ಪಡೆದುಕೊಂಡು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಂದ ವಿವರಣೆ ಕೇಳಲಾಗಿದೆ. ಯಾವುದೇ ವೈದ್ಯರು ತಪ್ಪಿತಸ್ಥರೆಂದು ಕಂಡುಬಂದರೆ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಗುವಿನ ಪೋಷಕರು ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಕಿತ್ ಕುಮಾರ್ ಅಗರ್ವಾಲ್ ಅವರನ್ನು ಭೇಟಿ ಮಾಡಿ, ಒಂದೇ ಸಿರಿಂಜ್ ಅನ್ನು ಹಲವಾರು ಮಕ್ಕಳಿಗೆ ಬಳಸಲಾಗಿದೆ ಎಂದು ದೂರಿದರು. ಫೆಬ್ರವರಿ 20 ರಂದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಆಕೆಯ ಸಂಬಂಧಿಕರು ಹೇಳಿಕೊಂಡಿದ್ದಾರೆ. ಆದರೆ, ಆಕೆಗೆ ಹೆಚ್‌ಐವಿ ಪಾಸಿಟಿವ್ ಎಂದು ಪರೀಕ್ಷಿಸಿದಾಗ ತಡರಾತ್ರಿಯಲ್ಲಿ ಆರೋಗ್ಯ ಕಾರ್ಯಕರ್ತರು ಆಕೆಯನ್ನು ಆಸ್ಪತ್ರೆಯಿಂದ ಹೊರಹಾಕಿದ್ದಾರೆ.

ದೂರು ಸ್ವೀಕರಿಸಿದ ನಂತರ, ತನಿಖೆಯನ್ನು ಪ್ರಾರಂಭಿಸಲಾಗಿದೆ. ತನಿಖೆ ಮುಗಿದ ನಂತರ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಇಟಾಹ್‌ ನ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read