alex Certify ಹತ್ರಾಸ್ ನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಪುತ್ರಿಗೆ ನಿರಂತರ ಲೈಂಗಿಕ ಕಿರುಕುಳ – ದೂರು ನೀಡಿದ್ದಕ್ಕೆ ತಂದೆಯ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ರಾಸ್ ನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಪುತ್ರಿಗೆ ನಿರಂತರ ಲೈಂಗಿಕ ಕಿರುಕುಳ – ದೂರು ನೀಡಿದ್ದಕ್ಕೆ ತಂದೆಯ ಕೊಲೆ

ಹತ್ರಾಸ್: ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ದೂರು ನೀಡಿದ ವ್ಯಕ್ತಿಯನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ್ದಾರೆ.

ಇತ್ತೀಚೆಗೆ ತನ್ನ ಪುತ್ರಿಯ ಮೇಲೆ ನಿರಂತರ ಲೈಂಗಿಕ ಕಿರುಕುಳ ನಡೆದ ಬಗ್ಗೆ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಆತನನ್ನು ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಫೈರಿಂಗ್ ಮಾಡಿ ಕೊಲೆ ಮಾಡಿದ್ದಾರೆ.

ಹತ್ರಾಸ್ ಜಿಲ್ಲೆ ಸಾಸ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ನೌಕರ್ ಪುರ್ ಗ್ರಾಮದಲ್ಲಿ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಕಳುಹಿಸಲಾಗಿದೆ. ಕುಟುಂಬದವರು ನೀಡಿದ ಮಾಹಿತಿ ಅನ್ವಯ ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡಿರುವುದಾಗಿ ಡಿಎಸ್ಪಿ ರುಚಿ ಗುಪ್ತಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...