ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ತೆರಳಲು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಮತ್ತೆ ಮೂವರಿಗೆ ಕೊನೆಗೂ ಅನುಮತಿ ನೀಡಿದೆ.
ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ರೈತರನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಅಕ್ಟೋಬರ್ 4ರಂದು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಕಳೆದ ಎರಡು ದಿನಗಳಿಂದ ಪ್ರಿಯಾಂಕಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.
ಪ್ರತಿ ತಿಂಗಳು 28 ರೂ. ಹೂಡಿಕೆ ಮಾಡಿ 4 ಲಕ್ಷ ರೂ.ಗಳ ʼವಿಮೆʼ ವ್ಯಾಪ್ತಿಗೆ ಬನ್ನಿ
ಇದೀಗ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು ಐದು ಜನರ ನಿಯೋಗಕ್ಕೆ ಲಖಿಂಪುರ ಘಟನಾ ಸ್ಥಳಕ್ಕೆ ಭೇಟಿ ನೀಡಲು ಉತ್ತರ ಪ್ರದೇಶ ಗೃಹ ಇಲಾಖೆ ಅನುಮತಿ ನೀಡಿದೆ.
ಲಖಿಂಪುರದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ಕಾರು ಪ್ರತಿಭಟನಾ ನಿರತ ರೈತರ ಮೇಲೆ ಹರಿದು ಇಬ್ಬರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಜನರು ಸಾವನಪ್ಪಿದ್ದರು.