ಉತ್ತರ ಪ್ರದೇಶದ ಮೊದಲ ಹಂತದ ಚುನಾವಣೆಗೆ ಒಂದು ದಿನ ಬಾಕಿಯಿರುವಾಗ ಕೇಂದ್ರ ಸಚಿವರೊಬ್ಬರು ವಿಡಿಯೋವೊಂದನ್ನ ಹಂಚಿಕೊಂಡು ಪರೋಕ್ಷವಾಗಿ ಸಮಾಜವಾದಿ ಪಕ್ಷದ ವಿರುದ್ಧ ಆರೋಪಿಸಿದ್ದಾರೆ.
ಪುರುಷರ ಗುಂಪೊಂದು ಬುರ್ಖಾ ಧರಿಸಿದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡು, ಈ ವಿಡಿಯೋದಲ್ಲಿರುವ ಪುಂಡ ಪುರುಷರು ಸಮಾಜವಾದಿ ಪಕ್ಷದ ಕಾರ್ಯಕರ್ತರು ಅಥವಾ ಸ್ವಯಂ ಸೇವಕರೋ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಶಾಲೆಗಳಲ್ಲಿ ವಸ್ತ್ರಸಂಹಿತೆ ಪಾಲಿಸಲೇಬೇಕು: ಕಾಂಗ್ರೆಸ್ ಮಿತ್ರ ಪಕ್ಷ ಶಿವಸೇನೆ ನಾಯಕ ಆದಿತ್ಯ ಠಾಕ್ರೆ
ಕೆಂಪು ಟೋಪಿ ಧರಿಸಿರುವ ಪುರುಷನೊಬ್ಬ ಬುರ್ಕಾ ಧರಿಸಿದ ಯುವತಿಯನ್ನ ಅವಮಾನಿಸಿದ್ದಾನೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದಾರೆ. ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಹೋಗುತ್ತಿದ್ದ ಯುವತಿಯನ್ನ ಹಿಂಬಾಲಿಸಿದ ಪುರುಷರ ಗುಂಪು, ಆಕೆಯ ಬೆನ್ನಿನ ಮೇಲೆ ಸಮಾಜವಾದಿ ಪಕ್ಷದ ಪೋಸ್ಟರ್ ಅಂಟಿಸಿದ್ದಾರೆ. ಅವರು ಪೋಸ್ಟರ್‌ನಲ್ಲಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಫೋಟೋಗಳನ್ನು ಕಾಣಬಹುದು.
ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಪುರುಷರ ಗುಂಪನ್ನು ಸಮಾಜವಾದಿ ಪಕ್ಷದ ಕಾರ್ಯಕರ್ತರು ಎನ್ನಲಾಗ್ತಿದೆ. ಒಟ್ಟಿನಲ್ಲಿ ಈ ವಿಡಿಯೋ ಇಡೀ ಉತ್ತರಪ್ರದೇಶದಲ್ಲಿ ಸಂಚಲನ ಸೃಷ್ಟಿಸಿರುವುದು ನಿಜ.