alex Certify ಮತ್ತೊಬ್ಬ ನಾಯಕನ ಬಲಿ ಪಡೆದ ಕೊರೋನಾ: ಉತ್ತರಪ್ರದೇಶದ ಸಚಿವ ವಿಜಯ್ ಕಶ್ಯಪ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಬ್ಬ ನಾಯಕನ ಬಲಿ ಪಡೆದ ಕೊರೋನಾ: ಉತ್ತರಪ್ರದೇಶದ ಸಚಿವ ವಿಜಯ್ ಕಶ್ಯಪ್ ವಿಧಿವಶ

ಲಖ್ನೋ: ಉತ್ತರಪ್ರದೇಶದ ಸಚಿವ ವಿಜಯ್ ಕಶ್ಯಪ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಚಾತುರ್ವಲ್ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿದ್ದ 52 ವರ್ಷದ ವಿಜಯ್ ಕಶ್ಯಪ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು.

ಅವರು ಗುರುಗ್ರಾಮದ ಮೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯ ಕಶ್ಯಪ್ ನಿಧನಕ್ಕೆ ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿಜಯ ಕಶ್ಯಪ್ ಕೊರೋನಾ ಸೋಂಕಿನಿಂದ ಮೃತಪಟ್ಟ ಉತ್ತರಪ್ರದೇಶದ 5 ನೇ ಶಾಸಕರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...