alex Certify ಮತ್ತೊಂದು ಪೈಶಾಚಿಕ ಕೃತ್ಯ: ಸೋದರನ ಎದುರಲ್ಲೇ ಗನ್ ಪಾಯಿಂಟ್ ನಲ್ಲಿ ಗ್ಯಾಂಗ್ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಪೈಶಾಚಿಕ ಕೃತ್ಯ: ಸೋದರನ ಎದುರಲ್ಲೇ ಗನ್ ಪಾಯಿಂಟ್ ನಲ್ಲಿ ಗ್ಯಾಂಗ್ ರೇಪ್

ಮುಜಾಫರ್ ನಗರ್: ಉತ್ತರಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 15 ವರ್ಷದ ಬಾಲಕಿಯ ಮೇಲೆ ಆಕೆಯ ಸಹೋದರನ ಎದುರಲ್ಲೇ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಫುಗಾನ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಗಳಾದ ರಹೀಮ್, ಸಾಹೇಬ್, ಆರೀಫ್ ಮತ್ತು ಮಾರುಫ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹೋದರನ ಎದುರಲ್ಲೇ ಇಂತಹ ಕೃತ್ಯ ಎಸಗಿದ ಆರೋಪಿಗಳು ತಮ್ಮ ನೀಚಕೃತ್ಯದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಗನ್ ಪಾಯಿಂಟ್ ನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಕಂಡುಬಂದಿದ್ದಾಳೆ. ಆಕೆಯ ಸಹೋದರ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಐಪಿಸಿ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಅನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿ ಶರದ್ ಚಂದ್ರ ಶರ್ಮಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...