ಶಾಲಾ ಶಿಕ್ಷಕರೊಬ್ಬರು ಪೈಜಾಮ – ಕುರ್ತಾ ಧರಿಸಿದ್ದಕ್ಕೆ ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳಲು ಮುಂದಾದ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು. ಅಲ್ಲದೆ ನೀವು ಶಿಕ್ಷಕರ ರೀತಿ ಕಾಣದೆ ರಾಜಕಾರಣಿಯಂತಾಗಿದ್ದೀರಿ ಎಂದು ಜಿಲ್ಲಾಧಿಕಾರಿಗಳು ಆ ಶಿಕ್ಷಕರನ್ನು ಗೇಲಿ ಮಾಡುವ ವಿಡಿಯೋ ವೈರಲ್ ಆಗಿತ್ತು.
ಈ ಕುರಿತು ವಾದ – ವಿವಾದಗಳು ನಡೆಯುತ್ತಿರುವ ಮಧ್ಯೆ ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಸರ್ಕಾರಿ ನೌಕರರ ವಸ್ತ್ರ ಸಂಹಿತೆ ಕುರಿತು ಆದೇಶವೊಂದನ್ನು ಹೊರಡಿಸಿದ್ದಾರೆ. ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕರು ಮತ್ತು ಇತರೆ ಇಲಾಖೆಗಳ ನೌಕರರು ಜೀನ್ಸ್ ಮತ್ತು ಟೀ ಶರ್ಟ್ ಧರಿಸುವಂತಿಲ್ಲ ಎಂದು ಈ ಸುತ್ತೋಲೆಯಲ್ಲಿ ಹೇಳಲಾಗಿದೆ.
ಹಿರಿಯ ಅಧಿಕಾರಿಗಳು ಶಾಲೆ ಮತ್ತು ಇತರ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ವಸ್ತ್ರ ಸಂಹಿತೆ ಪಾಲನೆ ಕುರಿತು ಪರಿಶೀಲನೆ ನಡೆಸಲಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಆದರೆ ಈ ಆದೇಶಕ್ಕೆ ಬಹುತೇಕ ಸರ್ಕಾರಿ ನೌಕರರು ವಿರೋಧ ವ್ಯಕ್ತಪಡಿಸಿದ್ದು, ಸಭ್ಯವಾದ ವಸ್ತ್ರ ಯಾವುದನ್ನಾದರೂ ಧರಿಸಲು ಅನುಮತಿ ನೀಡಬೇಕು ಇಂಥವುದೇ ವಸ್ತ್ರ ಧರಿಸಬೇಕೆಂಬ ಆದೇಶ ಮಾಡುವುದು ಸರಿಯಲ್ಲ ಎಂದಿದ್ದಾರೆ.