ಪೊಲೀಸರೂ ಸಹ ಮಾನವೀಯತೆಯಿಂದ ವರ್ತಿಸುತ್ತಾರೆ ಎಂದು ಸಾಬೀತು ಪಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶ ಪೊಲೀಸ್ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿರುವ ಈ ವಿಡಿಯೋದಲ್ಲಿ, ಮೀರತ್‌ನಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹಿರಿಯ ವ್ಯಕ್ತಿಯೊಬ್ಬರಿಗೆ ರಸ್ತೆಯಲ್ಲಿ ಚೆಲ್ಲಿದ್ದ ಧಾನ್ಯಗಳನ್ನು ಆಯ್ದುಕೊಳ್ಳಲು ನೆರವಾಗಿದ್ದಾರೆ.
ಕೇವಲ ಧಾನ್ಯವನ್ನು ಆರಿಸಿಕೊಟ್ಟಿದ್ದು ಮಾತ್ರವಲ್ಲದೇ ಆ ವ್ಯಕ್ತಿಯನ್ನು ಸುರಕ್ಷಿತವಾಗಿ ಮನೆಗೂ ಸೇರಿಸಿ ಬಂದಿದ್ದಾರೆ ಈ ಅಧಿಕಾರಿ ಎಂದು ವಿಡಿಯೋಗೆ ಹಾಕಿರುವ ವಿವರಣೆಯಲ್ಲಿ ನೀಡಲಾಗಿದೆ.
ವಿಡಿಯೋದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಧಾನ್ಯಗಳನ್ನು ಆರಿಸುತ್ತಿದ್ದರೆ, ಮಿಕ್ಕವರು ರಸ್ತೆಯಲ್ಲಿ ಬರುತ್ತಿದ್ದ ವಾಹನಗಳನ್ನು ರಸ್ತೆಯ ಮತ್ತೊಂದು ಬದಿಯಲ್ಲಿ ಚಲಿಸುವಂತೆ ಸೂಚನೆ ನೀಡುತ್ತಿದ್ದಾರೆ.