ಲಖ್ನೋ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ ಹೊಸ ಚುನಾವಣಾ ಪೂರ್ವ ‘ಭಾಗಿದರಿ ಪರಿವರ್ತನ್ ಮೋರ್ಚಾ’ ಎಂಬ ಹೊಸ ಫ್ರಂಟ್ ಪ್ರಾರಂಭಿಸಿದ್ದು, ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶಕ್ಕೆ ಇಬ್ಬರು ಮುಖ್ಯಮಂತ್ರಿಗಳ ಆಯ್ಕೆ ಬಗ್ಗೆ ಭರವಸೆ ನೀಡಿದ್ದಾರೆ.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥರು ಅಧಿಕಾರಕ್ಕೆ ಬಂದ್ರೆ ಉತ್ತರ ಪ್ರದೇಶಕ್ಕೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವುದಾಗಿ ಹೇಳಿದ್ದಾರೆ. ಎಲ್ಲಾ 403 ಸ್ಥಾನಗಳಲ್ಲಿ ಯುಪಿ ಅಸೆಂಬ್ಲಿ ಚುನಾವಣೆಯಲ್ಲಿ ನಮ್ಮ ಮೈತ್ರಿಕೂಟ ಹೋರಾಡಲಿದೆ. ಇಬ್ಬರು ಸಿಎಂಗಳ ಪೈಕಿ ಒಬ್ಬರು ಹಿಂದುಳಿದ ವರ್ಗಗಳಿಗೆ ಮತ್ತು ಇನ್ನೊಬ್ಬರು ದಲಿತ ಸಮುದಾಯಕ್ಕೆ ಸೇರಿದವರಾಗಿರುತ್ತಾರೆ. ರಾಜ್ಯದಲ್ಲಿ ಮೂವರು ಡಿಸಿಎಂಗಳಲ್ಲಿ ಒಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿರುತ್ತಾರೆ ಎಂದರು.
ಸಂವಿಧಾನದ ಯಾವ ನಿಯಮದ ಅಡಿಯಲ್ಲಿ ರಾಜ್ಯಕ್ಕೆ ಇಬ್ಬರು ಸಿಎಂಗಳು ಇರುತ್ತಾರೆ ಎಂಬುದನ್ನು ಓವೈಸಿ ವಿವರಿಸಲಿಲ್ಲ. ಸಂವಿಧಾನದ 153 ಮತ್ತು 164 ನೇ ವಿಧಿಗಳ ನಿಬಂಧನೆಗಳ ಅಡಿಯಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನು ನೇಮಿಸಲಾಗುತ್ತದೆ, ಎರಡೂ ವಿಧಿಗಳು ಒಬ್ಬ ವ್ಯಕ್ತಿಯನ್ನು ರಾಜ್ಯದ ಸಿಎಂ ಎಂದು ಪರಿಗಣಿಸುತ್ತವೆ.