alex Certify ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಸಿಗಲ್ಲ ಸರಕಾರಿ ಉದ್ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಸಿಗಲ್ಲ ಸರಕಾರಿ ಉದ್ಯೋಗ

ಲಕ್ನೋ: ಉದ್ದೇಶಿತ ಜನಸಂಖ್ಯಾ ನಿಯಂತ್ರಣ ಮಸೂದೆಯ ಪ್ರಕಾರ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರಕಾರಿ ಉದ್ಯೋಗ ಸಿಗುವುದಿಲ್ಲ ಎಂದು ಉತ್ತರ ಪ್ರದೇಶ ಸರಕಾರದ ಕರಡು ಮಸೂದೆಯಲ್ಲಿ ಹೇಳಲಾಗಿದೆ.

ಯುಪಿಯ ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಕರಡು ಮಸೂದೆಯ ಪ್ರಕಾರ, ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದರಿಂದ, ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವ ಮತ್ತು ಯಾವುದೇ ರೀತಿಯ ಸರಕಾರಿ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸಲಾಗುತ್ತದೆ.

ಉತ್ತರ ಪ್ರದೇಶ ರಾಜ್ಯದ ಕಾನೂನು ಆಯೋಗ ಹೇಳುವಂತೆ ಈ ನಿಯಮಗಳು ರಾಜ್ಯದ ಜನಸಂಖ್ಯೆ ನಿಯಂತ್ರಣ ಮಸೂದೆ 2021 ಎಂಬ ಕರಡಿನ ಭಾಗವಾಗಿದೆ.

ರಾಜ್ಯದ ಎಲ್ಲ ಮಾಧ್ಯಮಿಕ ಶಾಲೆಗಳಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಸಂಬಂಧಿಸಿದ ವಿಷಯವನ್ನು ಕಡ್ಡಾಯವಾಗಿ ಪರಿಚಯಿಸುವುದು ಸರಕಾರ ಕರ್ತವ್ಯ ಎಂದು ಕರಡು ಮಸೂದೆಯಲ್ಲಿ ತಿಳಿಸಲಾಗಿದೆ.

ಯುಪಿಎಸ್ಎಲ್ಸಿ ವೆಬ್ ಸೈಟ್, ‘ರಾಜ್ಯ ಕಾನೂನು ಆಯೋಗವು ಯುಪಿಯ ಜನಸಂಖ್ಯೆ ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣಕ್ಕಾಗಿ ಕಾರ್ಯನಿವರ್ಹಿಸುತ್ತಿದೆ ಹಾಗೂ ಕರಡು ಮಸೂದೆಯನ್ನು ಸಿದ್ಧಪಡಿಸಿದೆ’ ಎಂದು ಹೇಳಿದೆ.

ಈ ಉದ್ದೇಶಿತ ಮಸೂದೆ ಬಗ್ಗೆ ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಲು ಸರಕಾರ ನಿರ್ಧರಿಸಿದ್ದು, ಜುಲೈ 19ರ ಒಳಗಾಗಿ ಜನರು ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.

ಇನ್ನು ಎರಡು ಮಕ್ಕಳ ನೀತಿಯನ್ನು ಅನುಸರಿಸಿದವರಿಗೆ ತಮ್ಮ ಸರಕಾರಿ ಸೇವೆಯ ಸಮಯದಲ್ಲಿ ಎರಡು ಹೆಚ್ಚುವರಿ ಭತ್ಯೆ ಪಡೆಯಬಹುದಾಗಿದೆ. ಮಾತೃತ್ವ ರಜೆಯಂತೆ, 12 ತಿಂಗಳ ಕಾಲ ಪಿತೃತ್ವ ರಜೆ ಪಡೆಯಬಹುದಾಗಿದೆ. ಈ ಅವಧಿಯಲ್ಲಿ ಅವರ ಸಂಪೂರ್ಣ ವೇತನ ಮತ್ತು ಭತ್ಯೆಯನ್ನು ಕೂಡ ಕೊಡಲಾಗುವುದು. ಹಾಗೆಯೇ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಉದ್ಯೋಗಿಗಳ ಕೊಡುಗೆಗಳ ನಿಧಿಯಲ್ಲಿ ಶೇಕಡಾ 3ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಕರಡಿನಲ್ಲಿ ತಿಳಿಸಲಾಗಿದೆ.

ಈ ಕಾಯಿದೆಯ ಅನುಷ್ಠಾನದ ಉದ್ದೇಶಕ್ಕಾಗಿ ರಾಜ್ಯ ಜನಸಂಖ್ಯಾ ನಿಧಿಯನ್ನು ರಚಿಸಲಾಗುವುದು. ಸರಕಾರದ ಕರ್ತವ್ಯಗಳನ್ನು ಪಟ್ಟಿಮಾಡಿ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತೃತ್ವ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಕೇಂದ್ರಗಳು ಮತ್ತು ಎನ್ ಜಿಒಗಳು ಗರ್ಭನಿರೋಧಕ ಮಾತ್ರೆಗಳು, ಕಾಂಡೋಮ್ ಇತ್ಯಾದಿಗಳನ್ನು ವಿತರಿಸುತ್ತವೆ. ಸಮುದಾಯ ಆರೋಗ್ಯ ಕಾರ್ಯಕರ್ತರ ಮುಖಾಂತರ ಕುಟುಂಬ ಯೋಜನೆ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಹಾಗೂ ರಾಜ್ಯದಾದ್ಯಂತ ಗರ್ಭಧಾರಣೆ, ಹೆರಿಗೆ, ಜನನ ಮತ್ತು ಮರಣಗಳ ನೋಂದಣಿಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಕರಡು ಮಸೂದೆ ಹೇಳುತ್ತದೆ.

ರಾಜ್ಯದ ಸುಸ್ಥಿರ ಅಭಿವೃದ್ಧಿಯ ಉತ್ತೇಜನಕ್ಕಾಗಿ ಜನಸಂಖ್ಯೆ ನಿಯಂತ್ರಿಸುವುದು, ಸ್ಥಿರಗೊಳಿಸುವುದು ಅಗತ್ಯವಾಗಿ ಎಂದು ಮಸೂದೆ ಹೇಳುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...