alex Certify SHOCKING: ತಡರಾತ್ರಿ ಆಸ್ಪತ್ರೆಯಲ್ಲಿ ನಿದ್ದೆಗೆ ಜಾರಿದ್ದ ಯುವತಿ ಜೊತೆ ಅಸಭ್ಯ ವರ್ತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಡರಾತ್ರಿ ಆಸ್ಪತ್ರೆಯಲ್ಲಿ ನಿದ್ದೆಗೆ ಜಾರಿದ್ದ ಯುವತಿ ಜೊತೆ ಅಸಭ್ಯ ವರ್ತನೆ

ಆಗ್ರಾ: ಉತ್ತರಪ್ರದೇಶದ ಮಧುರಾ ಜಿಲ್ಲೆಯ ಕೊಟ್ವಾಲಿ ನಗರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ.

18 ವರ್ಷದ ಯುವತಿಗೆ ಆಸ್ಪತ್ರೆಯ ಸಿಬ್ಬಂದಿ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಬುಧವಾರ ಪ್ರಕರಣ ದಾಖಲಿಸಲಾಗಿದೆ.

ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆಯ ನಂತರ ವೈದ್ಯರು ನೋವು ನಿವಾರಕ ನೀಡಿದ್ದು, ರಾತ್ರಿ 1 ಗಂಟೆ ವೇಳೆಗೆ ಶ್ಯಾಮ್ ಗುಜ್ಜರ್ ಎಂದು ಗುರುತಿಸಲಾದ ಸಿಬ್ಬಂದಿ ಅನುಚಿತವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ.

ಯುವತಿ ಎಚ್ಚರಗೊಂಡ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಯುವತಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...