ಉತ್ತರಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆ ಬಾರ್ಹ್ನಿ ಪ್ರಾಥಮಿಕ ಆರೋಗ್ಯ ವಲಯವಾಗಿದ್ದು, ಅಲ್ಲಿ ಆಡಾಹಿ ಕಲಾನ್ ಗ್ರಾಮದ ಸುಮಾರು 20 ಜನರಿಗೆ ಮೊದಲ ಮತ್ತು ಎರಡನೆಯ ಡೋಸ್ ಲಸಿಕೆ ನೀಡುವಾಗ ಬೇರೆ ಬೇರೆ ಲಸಿಕೆ ನೀಡಲಾಗಿದೆ.
ಉತ್ತರಪ್ರದೇಶದ ಸಿದ್ದಾರ್ಥ್ ನಗರ ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರ ನಿರ್ಲಕ್ಷದಿಂದಾಗಿ ಮೊದಲ ಡೋಸ್ ಕೋವಿಶೀಲ್ಡ್ ಪಡೆದುಕೊಂಡವರಿಗೆ ಎರಡನೇ ಡೋಸ್ ನಲ್ಲಿ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಇದರಿಂದಾಗಿ ಲಸಿಕೆ ಪಡೆದುಕೊಂಡ 20 ಕ್ಕೂ ಅಧಿಕ ಮಂದಿ ಆತಂಕಕ್ಕೆ ಒಳಗಾಗಿದ್ದಾರೆ.
ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿಯ ಪ್ರಮಾದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿದ್ಧಾರ್ಥ್ ನಗರ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಸಂದೀಪ್ ಚೌಧರಿ ಹೇಳಿದ್ದಾರೆ.
ಎರಡು ಲಸಿಕೆ ಪಡೆದುಕೊಂಡವರ ಮೇಲೆ ನಿಗಾ ವಹಿಸಲಾಗಿದೆ. ಅವರಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ತನಿಖೆ ನಡೆಸಲು ವಿಶೇಷ ತಂಡ ರಚಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.