ಇಂದು ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಪ್ರೊ ಕಬಡ್ಡಿಯ ಎಲಿಮಿನೇಟರ್ ಪಂದ್ಯಗಳು ನಡೆಯಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧಾಸ್ ಮತ್ತು ಜೈಪುರ್ ಪಿಂಕ್ ಪ್ಯಾಂಥರ್ಸ್ ಮುಖಾಮುಖಿಯಾಗುತ್ತಿವೆ.
ಯುಪಿ ಯೋಧಾಸ್ ತಂಡದಲ್ಲಿ ಮೂರು ರೈಡರ್ಗಳಿದ್ದರೆ, ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದಲ್ಲಿ ರೈಡ್ ಮಷೀನ್ ಅರ್ಜುನ್ ದೇಸ್ವಾಲ್ ಒಬ್ಬರೇ ಏಕಾಂಗಿ ಹೋರಾಟ ನಡೆಸುವ ಮೂಲಕ ಅತಿ ವೇಗವಾಗಿ ಪಾಯಿಂಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ.
ಒಟ್ಟಾರೆ ಉಭಯ ತಂಡಗಳು ಬಲಿಷ್ಠವಾಗಿದ್ದು, ಯಾವ ತಂಡ ಸೆಮಿ ಫೈನಲ್ ಗೆ ಪ್ರವೇಶಿಸಲಿದೆ. ಕಾದುನೋಡಬೇಕಾಗಿದೆ. ಇದಾದ ಬಳಿಕ ಮತ್ತೊಂದು ಎಲಿಮಿನೇಟರ್ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್ ಹಾಗೂ ಯು ಮುಂಬಾ ತಂಡ ಕಾದಾಡಲಿವೆ.