ಲಖ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಎಸ್ಮಾ ಕಾಯಿದೆ ಜಾರಿಗೊಳಿಸಿದೆ. 6 ತಿಂಗಳವರೆಗೆ ಯಾವುದೇ ಮುಷ್ಕರ, ಪ್ರತಿಭಟನೆ ನಡೆಸದಂತೆ ಆದೇಶ ಹೊರಡಿಸಲಾಗಿದೆ.
ಎಸ್ಮಾ ಕಾಯ್ದೆ ಜಾರಿಯಾಗಿರುವುದರಿಂದ ವಾರೆಂಟ್ ಇಲ್ಲದೆ ಯಾರನ್ನು ಬೇಕಾದರೂ ಬಂಧಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ಯಾವುದೇ ಇಲಾಖೆ, ನಿಗಮಗಳು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳು ಪ್ರತಿಭಟನೆ ನಡೆಸುವಂತಿಲ್ಲ. ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ ಅನ್ವಯ ನಿಯಮ ಉಲ್ಲಂಘಿಸಿದವರಿಗೆ ದಂಡ, ಜೈಲು ಶಿಕ್ಷೆ ವಿಧಿಸಲಾಗುವುದು.
ಕೊರೋನಾ ಸಾಂಕ್ರಾಮಿಕ ರೋಗದ ನಡುವೆ ಉತ್ತರ ಪ್ರದೇಶದ ಅನೇಕ ಸರ್ಕಾರಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ಆಯೋಜಿಸಲು ತಯಾರಿ ನಡೆಸಿದ್ದಾರೆ. ಇದನ್ನು ತಡೆಯಲು ಯೋಗಿ ಸರ್ಕಾರ ಎಸ್ಮಾ ಕಾನೂನು ಜಾರಿಯಾಗಿರುವುದರಿಂದ ಅಗತ್ಯ ಸೇವೆಗಳಲ್ಲಿ ತೊಡಗಿದ ನೌಕರರಿಗೆ ರಜೆ ಮತ್ತು ಮುಷ್ಕರ ನಡೆಸಲು ಅವಕಾಶ ಇರುವುದಿಲ್ಲ. ಸೂಚನೆ ಪಾಲಿಸುವುದು ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.