alex Certify BIG NEWS: ಶಿಕ್ಷಕಿಯ ಮೇಲೆ 6 ಬಾರಿ ಗುಂಡು ಹಾರಿಸಿ ಯುವಕ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕಿಯ ಮೇಲೆ 6 ಬಾರಿ ಗುಂಡು ಹಾರಿಸಿ ಯುವಕ ಆತ್ಮಹತ್ಯೆ

ಮಹಿಳಾ ಶಿಕ್ಷಕಿಯ ಮೇಲೆ ಆರು ಗುಂಡುಗಳನ್ನು ಹಾರಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ಇಕ್ದಿಲ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರ ಶಿಕ್ಷಕಿಯನ್ನು ಇಟಾವಾದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಹಿಳೆ ಗಾಯಗೊಂಡ ಸ್ಥಿತಿಯಲ್ಲಿ ರಸ್ತೆಯ ಮೇಲೆ ಬಿದ್ದಿರುವ ಬಗ್ಗೆ ದಾರಿಹೋಕರೊಬ್ಬರು ತಿಳಿಸಿದ ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಮಹಿಳೆಯ ಸಂಬಂಧಿಕರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರೊಂದಿಗೆ ಉನ್ನತ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಇಟಾವಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಜೈ ಪ್ರಕಾಶ್ ಸಿಂಗ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವನೀಶ್ ಕುಮಾರ್ ರೈ ಕೂಡ ಸ್ಥಳಕ್ಕೆ ಆಗಮಿಸಿದರು.

ಗಾಯಗೊಂಡ ಮಹಿಳೆ ಮತ್ತು ಯುವಕರು ಪರಸ್ಪರ ಪರಿಚಿತರು ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ತನಿಖೆಯ ನಂತರ ಸತ್ಯಾಂಶ ಹೊರ ಬಂದರೆ ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...