
ಅನಿಲ್ ಕುಮಾರ್ ನಿರ್ದೇಶನದ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವಲ್ಲಿ ಯಶಸ್ವಿಯಾಗಿದೆ. ಉಪಾಧ್ಯಕ್ಷ ಇದೀಗ ಮೂರು ವಾರಗಳನ್ನು ಪೂರೈಸಿದ್ದು, ಈ ಸಂತಸವನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಫ್ಯಾಮಿಲಿ ಎಂಟರ್ಟೈನರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಚಿಕ್ಕಣ್ಣ ಹಾಗೂ ಮಲೈಕಾ ವಾಸುಪಾಲ್ ಪ್ರಮುಖ ಪಾತ್ರದಲ್ಲಿದ್ದು, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ನಟ ಶರಣ್ ಅತಿಥಿ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಡಿ ಎನ್ ಸಿನಿಮಾಸ್ ಬ್ಯಾನರ್ ನಡಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಶೇಖರ್ ಚಂದ್ರ ಛಾಯಾಗ್ರಹಣ, ಕೆ ಎಲ್ ರಾಜಶೇಖರ್ ಡೈಲಾಗ್ ಬರೆದಿದ್ದಾರೆ.
