alex Certify ಬಜೆಟ್ 2022: ಎಲೆಕ್ಟ್ರಿಕ್ ವಾಹನಗಳ ಮೇಲೆ ಮತ್ತಷ್ಟು ರಿಯಾಯಿತಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜೆಟ್ 2022: ಎಲೆಕ್ಟ್ರಿಕ್ ವಾಹನಗಳ ಮೇಲೆ ಮತ್ತಷ್ಟು ರಿಯಾಯಿತಿ ಸಾಧ್ಯತೆ

2022ರ ಬಜೆಟ್‌ಗಾಗಿ ಸರ್ಕಾರ ತಯಾರಿ ನಡೆಸುತ್ತಿದೆ. ಇತರ ಕೈಗಾರಿಕೆಗಳ ಜೊತೆಗೆ ಆಟೋ ಉದ್ಯಮವೂ ಈ ಬಾರಿ ಬಜೆಟ್ ನಲ್ಲಿ  ಹೆಚ್ಚಿನ ನಿರೀಕ್ಷೆ ಹೊಂದಿದೆ. ಫೆಬ್ರವರಿ 1, 2022 ರಂದು ಮಂಡಿಸಲಿರುವ ಬಜೆಟ್‌ನಲ್ಲಿ  ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ. ಇ-ವಾಹನಗಳಿಗೆ ಉತ್ತೇಜನ ನೀಡಲು ಸರ್ಕಾರ ಈ ಬಜೆಟ್‌ನಲ್ಲಿ FAME-2 ನೀತಿಯ ಅಡಿಯಲ್ಲಿ ಸಬ್ಸಿಡಿ ಮತ್ತು ತೆರಿಗೆ ವಿನಾಯಿತಿಯನ್ನು ನೀಡುವ ಸಾಧ್ಯತೆ ಹೆಚ್ಚಿದೆ.

ಗ್ರಾಹಕರ ಬೇಡಿಕೆಯನ್ನು ಪೂರೈಸಲು ಮತ್ತು ಇ-ವಾಹನಗಳ ಬಳಕೆಯನ್ನು ಹೆಚ್ಚಿಸಲು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023 ರ ನಂತರ FAME-2 ಸಬ್ಸಿಡಿಯನ್ನು ಮುಂದುವರಿಸುವ ಸಾಧ್ಯತೆಯಿದೆ.

ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸುವತ್ತ ಸರ್ಕಾರ ಗಮನಹರಿಸಬೇಕು. ಕ್ಷಿಪ್ರ ಇವಿ ಅಳವಡಿಕೆಗೆ ಚಾರ್ಜಿಂಗ್ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಇಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದೆ. ಕಳೆದ 15 ವರ್ಷಗಳಲ್ಲಿ ಜನರು ಖರೀದಿಸಿದ ಇ-ವಾಹನಗಳ ಸಂಖ್ಯೆಗಿಂತ ಹೆಚ್ಚು ವಾಹನವನ್ನು 2021 ರಲ್ಲಿ ಖರೀದಿಸಿದ್ದಾರೆ. ಭಾರತೀಯ ಗ್ರಾಹಕರಲ್ಲಿ ಇ-ವಾಹನಗಳ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಕಳೆದ ವರ್ಷ ಒಟ್ಟು 2.34 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ. ಹಾಗಾಗಿ ಬಜೆಟ್ ನಲ್ಲಿ ಇದಕ್ಕೆ ಹೆಚ್ಚಿನ ಮಹತ್ವ ಸಿಗುವ ಸಾಧ್ಯತೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...