alex Certify UPDATE : ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು , ‘ICU’ ನಲ್ಲಿ ಚಿಕಿತ್ಸೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

UPDATE : ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು , ‘ICU’ ನಲ್ಲಿ ಚಿಕಿತ್ಸೆ.!

ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಅವರು ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಇಂದು ಜಿಲ್ಲೆಗೆ ಆಗಮಿಸಿದ್ದರು. ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸಚಿವ ಜಮೀರ್ ಅವರಿಗೆ ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಹೃದಯ ತಜ್ಞ ಡಾ.ಕಾರ್ತಿಕ್, ಡಾ.ಸುಜಯ್ ರಿಂದ ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಜಮೀರ್ ಆರೋಗ್ಯದ ಬಗ್ಗೆ ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...