alex Certify ‘EEDS’ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಅಪ್ ಡೇಟ್ ಮಾಡಿ : ಶಿಕ್ಷಣ ಇಲಾಖೆ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘EEDS’ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಅಪ್ ಡೇಟ್ ಮಾಡಿ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು : ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಅಪ್ ಡೇಟ್ ಮಾಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲಾ ಬಟವಾಡೆ ಅಧಿಕಾರಿಗಳಾದ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು ಹಾಗೂ ಎಲ್ಲಾ ಕಛೇರಿ ಮುಖ್ಯಸ್ಥರುಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ ಕ್ರಿ ಶ 2023-24 ನೇ ಸಾಲಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕಾರ್ಯನಿರ್ವಹಿಸುತ್ತಿರುವವರ ವಲಯ ಬದಲಾವಣೆ ವರ್ಗಾವಣೆ ಮತ್ತು ಕೋರಿಕೆ ವರ್ಗಾವಣೆಗಳನ್ನು ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಯಂತೆ ಹಮ್ಮಿಕೊಳ್ಳಲಾಗುತ್ತಿದೆ.ಈ ಬಗ್ಗೆ ವೇಳಾಪಟ್ಟಿ ಪ್ರಕಟಿಸಲಾಗುತ್ತಿದೆ. ಸದರಿ ವರ್ಗಾವಣೆ ಪ್ರಕ್ರಿಯೆಯು ಸಂಪೂರ್ಣವಾಗಿ ಇಇಡಿಎಸ್ ತಂತ್ರಾಂಶದಲ್ಲಿನ ಶಿಕ್ಷಕರ ಸೇವಾವಿವರಗಳನ್ನು ಆಧರಿಸಿಯೇ ಮುಕ್ತ ಮತ್ತು ಪಾರದರ್ಶಕತೆಯಿಂದ ನಡೆಯುತ್ತದೆ.

ಈ ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಎಲ್ಲಾ ಬಟವಾಡೆ ಅಧಿಕಾರಿಗಳು ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಇತ್ತೀಚಿನ ಬದಲಾದ ಸೇವಾ ವಿವರಗಳನ್ನು ಅವರ ಸೇವಾ ವಹಿಯಂತೆ ಪರಿಶೀಲಿಸಿ ಇ ಇ ಡಿ ಎಸ್ ತಂತ್ರಾಂಶದಲ್ಲಿ ಅಪ್ಡೇಟ್ ಮಾಡಿ ಅಂತಿಮಗೊಳಿಸಬೇಕಾದ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸೇವಾ ವಿವರಗಳನ್ನು ಅವರ ಸೇವಾ ವಹಿಯಂತೆ ಮತ್ತೊಮ್ಮೆ ಪರಿಶೀಲಿಸಿ ಈ ಕೆಳಕಂಡ ಅಂಶಗಳನ್ನೊಳಗೊಂಡಂತೆ ನಿಖರವಾದ ಸೇವಾ ವಿವರಗಳನ್ನು ಇಇಡಿಎಸ್ ತಂತ್ರಾಂಶದಲ್ಲಿ ಅಪ್ಡೇಟ್ ಮಾಡಿ ಅಂತಿಮಗೊಳಿಸುವ ಬಗ್ಗೆ ಆಯಾ ಬಟವಾಡೆ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚಿಸಲಾಗಿದೆ.

ಶಿಕ್ಷಕರ ಕ್ರಮಬದ್ಧವಾದ ಪ್ರಥಮ ಕೆ ಜಿ ಐ ಡಿ ಸಂಖ್ಯೆ ನಮೂದಾಗಿರುವ ಬಗ್ಗೆ ಪರಿಶೀಲಿಸುವುದು ತಂತ್ರಾಂಶದ ವರದಿಗಳನ್ನು ಗಮನಿಸಿದಂತೆ ಕೆಲವು ಪ್ರಕರಣಗಳಲ್ಲಿ ಎರಡೆರಡು KGID ಸಂಖ್ಯೆಗಳನ್ನು ನಮೂದಿಸಿ ಸೇವಾ ವಿವರಗಳನ್ನು ಅಂತಿಮಗೊಳಿಸಿರುವುದು ಕಂಡಬಂದಿರುತ್ತದೆ. ಇದು ಸಾಕಷ್ಟು ಗೊಂದಲಗಳಿಗೆ ಅವಕಾಶ ಮಾಡಿಕೊಡುವುದರಿಂದ ಪ್ರತಿಯೊಬ್ಬ ಶಿಕ್ಷಕರ ಮೊದಲನೇ ಕೆ.ಜಿ.ಐ.ಡಿ ಸಂಖ್ಯೆಯಡಿ ಸೇವಾ ವಿವರಗಳನ್ನು ಅಂತಿಮಗೊಳಿಸಿ ಉಳಿದ ವಿವರಗಳನ್ನು ತಂತ್ರಾಂಶದಿಂದ ತೆಗೆದು ಹಾಕಲು ಕ್ರಮವಹಿಸುವುದು
ಶಿಕ್ಷಕರ ಹೆಸರು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಕ್ರಮಬದ್ಧವಾಗಿರುವ ಬಗ್ಗೆ ಪರಿಶೀಲಿಸುವುದು. ಶಿಕ್ಷಕರ ಜನ್ಮ ದಿನಾಂಕ, ಸೇವೆಗೆ ಸೇರಿದ ದಿನಾಂಕ, ಪ್ರಸ್ತುತ ವೃಂದಕ್ಕೆ ಸೇರಿದ ದಿನಾಂಕ ಮುಂತಾದ ಅಂಶಗಳು ಕ್ರಮಬದ್ದವಾಗಿ ನಮೂದಾಗಿರುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸಲು ಸೂಚನೆ ನೀಡಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...