ದೇಶದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಇನ್ನಷ್ಟು ಉತ್ತೇಜನ ನೀಡುವ ಸಲುವಾಗಿ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ವಿಚಾರವಾಗಿ ಇಂದು ಮಾತನಾಡಿದ ಅವರು ಶೀಘ್ರದಲ್ಲಿಯೇ ಫೀಚರ್ ಫೋನ್ಗಳಲ್ಲಿಯೂ ಯುಪಿಐ ಪಾವತಿ ವ್ಯವಸ್ಥೆಯನ್ನು ಆರಂಭಿಸುವುದಾಗಿ ಹೇಳಿದ್ದಾರೆ.
ಇಷ್ಟು ದಿನ ಕೇವಲ ಸ್ಮಾರ್ಟ್ಫೋನ್ಗಳಲ್ಲಿ ಇಂಟರ್ನೆಟ್ ಸೇವೆಗಳು ಇದ್ದರೆ ಮಾತ್ರ ಯುಪಿಐ ಪಾವತಿ ಮಾಡುವುದು ಸಾಧ್ಯವಾಗುತ್ತಿತ್ತು. ಆದರೆ ಇನ್ಮುಂದೆ ಇಂಟರ್ನೆಟ್ ಸೇವೆಯನ್ನು ಬಳಕೆ ಮಾಡದೆಯೇ ಯುಪಿಐ ಪಾವತಿ ಮಾಡಬಹುದಾಗಿದೆ. ಇತ್ತೀಚೆಗೆ ನಡೆದ ದ್ವೈಮಾಸಿಕ ಹಣಕಾಸು ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಯುಪಿಐ ದೇಶದ ಏಕೈಕ ಅತಿದೊಡ್ಡ ಚಿಲ್ಲರೆ ಪಾವತಿ ವ್ಯವಸ್ಥೆಯಾಗಿದೆ. ಹಣಕಾಸು ಮಾರುಕಟ್ಟೆಗಳಲ್ಲಿ ಸೇವೆಯ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ ಯುಪಿಐ ಆಧಾರಿತ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ವಿವಿಧ ಆ್ಯಪ್ಗಳ ಸಹಾಯದಿಂದ ನೀವು ಬ್ಯಾಂಕ್ಗೆ ಯುಪಿಐ ಲಿಂಕ್ ಮಾಡಿಕೊಂಡು ಡಿಜಿಟಲ್ ಪಾವತಿ ಮಾಡಬಹುದಾಗಿದೆ.