alex Certify UPSC ಪರೀಕ್ಷೆ ಕುರಿತಂತೆ ಕೇಂದ್ರಕ್ಕೆ ‘ಸುಪ್ರೀಂ’ ನಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

UPSC ಪರೀಕ್ಷೆ ಕುರಿತಂತೆ ಕೇಂದ್ರಕ್ಕೆ ‘ಸುಪ್ರೀಂ’ ನಿಂದ ಮಹತ್ವದ ಸೂಚನೆ

ಕೋವಿಡ್​ ಸಾಂಕ್ರಾಮಿಕದ ಸಂದರ್ಭದಲ್ಲಿ 2022ರ ಜನವರಿಯಲ್ಲಿ ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗವು ಎಕ್ಸ್ಟ್ರಾ ಅಟೆಂಪ್ಟ್​​ಗೆ ಅವಕಾಶ ನೀಡುವ ಕುರಿತು ಗಮನ ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ.

ಕೋವಿಡ್​ ಸಾಂಕ್ರಾಮಿಕದಿಂದಾಗಿ ಯುಪಿಎಸ್​ಸಿ ಪರೀಕ್ಷೆ ಬರೆಯುವ ಅವಕಾಶ ನೀಡುವಂತೆ ಶಿಫಾರಸು ಮಾಡಿದ ಸಂಸದೀಯ ಸಮಿತಿಯ ವರದಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಈ ಮಾಹಿತಿಯನ್ನು ನೀಡಿದೆ. ಹಾಗೂ 2 ದಿನಗಳ ಒಳಗಾಗಿ ವಿನಂತಿಯನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.

ಸಂಸದೀಯ ಸಮಿತಿಯು ನೀಡಿರುವ ವರದಿಯ ಅಡಿಯಲ್ಲಿ ಈ ವಿಷಯವನ್ನು ಪರಿಗಣಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಈ ಹಿಂದೆ ಮುಖ್ಯ ಪರೀಕ್ಷೆಗಳಿಗೆ ಹೆಚ್ಚುವರಿ ಪ್ರಯತ್ನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಹೇಳಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...