ನವದೆಹಲಿ: 2020 ರಲ್ಲಿ ಕೊನೆಯ ಬಾರಿ ಯುಪಿಎಸ್ಸಿ ಪರೀಕ್ಷೆ ಬರೆಯುವ ಅವಕಾಶ ಇದ್ದವರಿಗೆ ಪರೀಕ್ಷೆ ಬರೆಯಲು ಮತ್ತೊಂದು ಹೆಚ್ಚುವರಿ ಅವಕಾಶ ನೀಡಲಾಗುವುದು.
ಕೊರೋನಾ ಕಾರಣದಿಂದಾಗಿ ಪರೀಕ್ಷೆಗೆ ಸರಿಯಾಗಿ ಸಿದ್ಧತೆ ನಡೆಸಲಾಗಿಲ್ಲ ಎಂದು ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ವಯೋಮಿತಿ ಅನ್ವಯ 2020 ರಲ್ಲಿ ಕೊನೆ ಬಾರಿ ಯುಪಿಎಸ್ಸಿ ಪರೀಕ್ಷೆ ಬರೆಯುವ ಅವಕಾಶ ಇದ್ದವರಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ.
ಪರೀಕ್ಷೆ ಬರೆಯಲು ನಿಗದಿಪಡಿಸಿದ ಪ್ರಯತ್ನಗಳ ಸಂಖ್ಯೆಯನ್ನು ಮೀರದೇ ಇದ್ದವರಿಗೆ ವಿನಾಯಿತಿ ಅನ್ವಯವಾಗುವುದಿಲ್ಲ. 2021 ನೇ ಸಾಲಿನ ಪರೀಕ್ಷೆಗೆ ವಯೋಮಿತಿ ಮೀರಿದವರಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. 2020 ರಲ್ಲಿ ನಡೆದ ಪರೀಕ್ಷೆಗೆ ಹಾಜರಾಗಿದ್ದವರು 2021ರ ಪರೀಕ್ಷೆಗೆ ಹಾಜರಾಗಬಹುದು ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರದಿಂದ ಈ ಕುರಿತು ಸುಪ್ರೀಂ ಕೋರ್ಟ್ ಅಫಿಡವಿಟ್ ಸಲ್ಲಿಸಲಾಗಿದ್ದು ಫೆಬ್ರವರಿ 8 ರಂದು ವಿಚಾರಣೆ ನಡೆಯಲಿದೆ.