ನವದೆಹಲಿ: ಯುಪಿಎಸ್ಸಿ ಹೆಚ್ಚುವರಿ ಪರೀಕ್ಷೆಗೆ ಅವಕಾಶ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.
2020ರಲ್ಲಿ ಕೋವಿಡ್ ಸಂದರ್ಭದಲ್ಲಿ ಆಕಾಂಕ್ಷಿಗಳು ಪರೀಕ್ಷೆ ಬರೆಯುವ ತಮ್ಮ ಕೊನೆಯ ಅವಕಾಶ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಂದು ಅವಕಾಶ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರಿದ್ದ ಪೀಠ ತಳ್ಳಿಹಾಕಿದೆ.
2020 ರಲ್ಲಿ ಕೊನೆಯ ಅವಕಾಶ ಕಳೆದುಕೊಂಡವರು ಸೇರಿದಂತೆ ಯುಪಿಎಸ್ಸಿ ಆಕಾಂಕ್ಷಿಗಳ ವಯೋಮಿತಿಯಲ್ಲಿ ಒಂದು ಸಲ ವಿನಾಯಿತಿ ಕೊಡುವುದರಿಂದ ಬೇರೆ ಅಭ್ಯರ್ಥಿಗಳಿಗೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಕೇಂದ್ರ ಸರ್ಕಾರ ಫೆಬ್ರವರಿ 9 ರಂದು ನ್ಯಾಯಾಲಯಕ್ಕೆ ಹೇಳಿದ್ದು, ಕಳೆದ ವರ್ಷ ಅಕ್ಟೋಬರ್ ನಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಂಡರು ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಈ ವರ್ಷ ಇನ್ನೂ ಒಂದು ಅವಕಾಶ ಸಿಗಲಿದೆ ಎಂದು ತಿಳಿಸಿದೆ. ಹೀಗಾಗಿ ಯುಪಿಎಸ್ಸಿ ಹೆಚ್ಚುವರಿ ಪರೀಕ್ಷೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.