ಕೇಂದ್ರ ಲೋಕ ಸೇವಾ ಆಯೋಗ ವತಿಯಿಂದ 159 ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬಾರ್ಡರ್ ಸೆಕ್ಯುರಿಟಿ ಫೋರ್ಸ್ – 35 ಹುದ್ದೆಗಳು, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ – 36 ಹುದ್ದೆಗಳು, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ – 67 ಹುದ್ದೆಗಳು, ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ – 20 ಹುದ್ದೆಗಳು, ಸಶಸ್ತ್ರ ಸೀಮಾ ಬಲ – 1 ಹುದ್ದೆ ಸೇರಿ ಒಟ್ಟು 159 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಕನಿಷ್ಟ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ 3 ವರ್ಷ, ಪ.ಜಾ,ಪ.ಪಂ,ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು 200 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲ ಚೇತನರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗಮನಿಸಬಹುದಾಗಿದೆ. ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 5, ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎನ್ನಲಾಗಿದೆ.