alex Certify ಶಾಲೆ ತೊರೆದು ಬೇರೆಡೆ ಸೇರ್ಪಡೆಗೊಂಡ ವಿದ್ಯಾರ್ಥಿಗಳು; ಮನನೊಂದ ಶಿಕ್ಷಕ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ತೊರೆದು ಬೇರೆಡೆ ಸೇರ್ಪಡೆಗೊಂಡ ವಿದ್ಯಾರ್ಥಿಗಳು; ಮನನೊಂದ ಶಿಕ್ಷಕ ಆತ್ಮಹತ್ಯೆಗೆ ಶರಣು

ಪುಣೆ: ಶಿಕ್ಷಕರೊಬ್ಬರು ಶಾಲಾ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟ ಅರವಿಂದ್ ದೇವ್ಕರ್ ಅವರು ಪುಣೆ ಜಿಲ್ಲೆಯ ದೌಂಡ್ ತಹಸಿಲ್‌ನ ಹೊಳೆ ವಸ್ತಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಶಾಲೆಗೆ ವರ್ಗಾವಣೆಗೊಂಡಿದ್ದರು.

ಕೆಲವು ದಿನಗಳ ಹಿಂದೆ ಅವರು ಶಾಲಾ ಆವರಣವನ್ನು ಸ್ವಚ್ಛಗೊಳಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದರು. ಈ ವಿಷಯವನ್ನು ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸಿದಾಗ ಅವರು ಸಂಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದ್ರಿಂದ ಹತ್ತರಲ್ಲಿ ಒಂಬತ್ತು ವಿದ್ಯಾರ್ಥಿಗಳು ಬೇರೆ ಶಾಲೆಗೆ ದಾಖಲಾಗಿದ್ದಾರೆ. ಈ ಬೆಳವಣಿಗೆಯಿಂದ ಮನನೊಂದ ದೇವಕರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇವಕರ್ ವಿಷ ಸೇವಿಸಿದ್ದನ್ನು ತಿಳಿದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರ ಆರೋಗ್ಯ ಗಂಭೀರವಾದ ಹಿನ್ನೆಲೆಯಲ್ಲಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

ಆತ್ಮಹತ್ಯೆಯ ಪತ್ರದಲ್ಲಿ, ದೇವಕರ್ ಅವರು ವಿದ್ಯಾರ್ಥಿಗಳು ಮಾತ್ರವಲ್ಲದೆ ಅವರ ಪೋಷಕರ ಹೃದಯವನ್ನು ಗೆಲ್ಲುವಲ್ಲಿ ವಿಫಲರಾಗಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದಾರೆ. ತಾನು ತಪ್ಪಿತಸ್ಥ ಎಂದು ಭಾವಿಸಿದ ಅವರು, ತಮ್ಮ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದರು.

ದೇವಕರ್ ಅವರು ಕಳೆದ 19 ವರ್ಷಗಳಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಗೌರವ ಕೂಡ ಸಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...