ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ವಿನ್ಯಾಸ ನಕ್ಷೆ ಅನುಮೋದನೆ ಅಧಿಕಾರ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಗ್ರಾಮ ಪಂಚಾಯಿತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೂ ಪರಿವರ್ತಿತ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವ ಅಧಿಕಾರ ಕೊಡುವುದಿಲ್ಲ. ಇಂತಹ ಅಧಿಕಾರವನ್ನು ಯೋಜನಾ ಪ್ರಾಧಿಕಾರ ಅಥವಾ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮಾತ್ರ ನೀಡಬೇಕೆಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ನಕ್ಷೆ ಅನುಮೋದನೆ ನೀಡುವಂತಹ ತಜ್ಞರು ಇರುವುದಿಲ್ಲ. ಹೀಗಾಗಿ ಪ್ರಾಧಿಕಾರಗಳಿಗೆ ಇಂತಹ ಅಧಿಕಾರ ನೀಡಲಾಗಿದೆ. ಒಂದು ವೇಳೆ ಯಾವುದೇ ಪ್ರಾಧಿಕಾರದಲ್ಲಿ ಸಿಬ್ಬಂದಿ ಕೊರತೆ ಇದ್ದಲ್ಲಿ ಅಧಿಕಾರಿಗಳನ್ನು ಪ್ರಭಾರ ಇಲ್ಲವೇ ನಿಯೋಜನೆಯ ಮೂಲಕ ನೇಮಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.