ಮಂಡ್ಯ: ಕೊರೊನಾ ಸಂಕಷ್ಟದಿಂದಾಗಿ ಒಂದೆಡೆ ಹಲವು ಶಾಲೆಗಳು ಬಾಗಿಲು ಮುಚ್ಚಿದ್ದು, ಇನ್ನೊಂದೆಡೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹೋರಾಟಗಳು ಕೂಡ ನಡೆಯುತ್ತಿವೆ. ಇಂಥ ಸಂದರ್ಭದಲ್ಲಿ ಸರ್ಕಾರಿ ಉರ್ದು ಶಾಲೆಯೊಂದನ್ನು ಪ್ರಾರ್ಥನಾ ಮಂದಿರವನ್ನಾಗಿ ಬದಲಿಸಿದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆಯನ್ನು ಪ್ರಾರ್ಥನಾ ಮಂದಿರವನ್ನಾಗಿ ಬದಲಿಸಲು ಗ್ರಾಮ ಪಂಚಾಯಿತಿಯೇ ಮುಂದಾಗಿದೆ ಎಂದು ತಿಳಿದುಬಂದಿದೆ.
ಲಸಿಕೆ ಪಡೆದವರಿಗೆ ಕೆಲಸ..! ಆಸ್ಟ್ರೇಲಿಯಾ ನಿರ್ಧಾರದ ವಿರುದ್ಧ ಬೀದಿಗಿಳಿದ ಜನ
45 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಸರ್ಕಾರಿ ಉರ್ದು ಶಾಲೆಗೆ ವಿದ್ಯಾರ್ಥಿ ನಿಲಯ, ಅಂಗನವಾಡಿ, ಬಿಸಿಯೂಟದ ಅಡುಗೆ ಮನೆ, ಕನ್ನಡ ಶಾಲೆಯ ಎರಡು ಕೊಠಡಿ ಸೇರಿದಂತೆ ಎಲ್ಲಾ ವಿಧದ ವ್ಯವಸ್ಥೆಗಳೂ ಇದ್ದು, ಇದೀಗ ವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಶಾಲೆ ಮುಚ್ಚಲಾಗಿದೆ. ಕೆಲ ಧಾರ್ಮಿಕ ಮುಖಂಡರು ಈ ಶಾಲೆಯನ್ನು ಅತಿಕ್ರಮಣ ಮಾಡಿಕೊಂಡು ಪ್ರಾರ್ಥನಾ ಮಂದಿರ ಮಾಡಲು ಹೊರಟಿದ್ದು, ಇದಕ್ಕೆ ಗ್ರಾಮ ಪಂಚಾಯಿತಿ ಬೆಂಬಲ ನೀಡಿದೆ.
ಈ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರ್ ಶಾಲೆಯಲ್ಲಿದ್ದ ವಸ್ತುಗಳನ್ನು ತೆರವುಗೊಳಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.