alex Certify ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನಿರಂತರ ನೀರು ಹರಿಸುವ ಬಗ್ಗೆ ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನಿರಂತರ ನೀರು ಹರಿಸುವ ಬಗ್ಗೆ ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ಗಣನೀಯ ಪ್ರಮಾಣದ ನೀರಿನ ಕೊರತೆ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬೆಳೆದಿರುವ ಭತ್ತ ಮತ್ತು ತೋಟಗಾರಿಕೆ ಬೆಳೆಗಳಿಗೆ ನಿರಂತರ ನೀರು ಹರಿಸಲು ಅನುಕೂಲವಾಗುವಂತೆ ಸೆಪ್ಟಂಬರ್ 11ರೊಳಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಕಾಡಾ ಅಧ್ಯಕ್ಷ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿವಮೊಗ್ಗ ಸಮೀಪದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಸಾಲಿನ ಭದ್ರಾ ಜಲಾಶಯದ 83ನೇ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ರಾಜ್ಯದ ಉಪಮುಖ್ಯಮಂತ್ರಿಗಳು ಈ ಸಂಬಂಧ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಮಾರ್ಗದರ್ಶನ ನೀಡಿದ್ದರ ಮೇರೆಗೆ ದಿನಾಂಕ ನಿಗಧಿಪಡಿಸಿ ಸಭೆ ನಡೆಸಲಾಗಿದೆ.

ಸಭೆಯಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ, ಅದರ ಸದ್ಭಳಕೆ ಹಾಗೂ ರೈತರ ಹಿತ ಕಾಯುವಲ್ಲಿ ಇರಬಹುದಾದ ಸಾಧಕ-ಬಾದಕಗಳ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಲ್ಲಿ ಚರ್ಚಿಸಿ, ರೈತ ಮುಖಂಡರ, ಅಧಿಕಾರಿಗಳ ಹಾಗೂ ತಜ್ಞರ ಅಭಿಪ್ರಾಯ ಪಡೆದು, ಈಗಾಗಲೇ ಬೆಳೆಯಲಾಗಿರುವ ಭತ್ತ, ಬೇಸಿಗೆ ಹಂಗಾಮಿನಲ್ಲಿ ಅಡಿಕೆ, ತೆಂಗು ಮತ್ತು ತೋಟಗಾರಿಕೆ ಬೆಳೆಗಳ ಸಂರಕ್ಷಣೆ ಹಾಗೂ ಈ ಭಾಗದ ಜನರ ಕುಡಿಯುವ ನೀರಿನ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಚ್ಚುಕಟ್ಟು ಪ್ರದೇಶದ ಬೆಳೆಗಾರರಿಗೆ ಅನುಕೂಲವಾಗುವಂತೆ ಮತ್ತೊಮ್ಮೆ ಶೀಘ್ರದಲ್ಲಿ ಸಭೆ ನೀರಾವರಿ ಸಮಿತಿ ಸಭೆ ಕರೆದು ಚರ್ಚಿಸಲಾಗುವುದು. ಕೃಷಿಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ರೈತರ ಹಿತ ಕಾಯುವಲ್ಲಿ ಸರ್ಕಾರ ಬದ್ಧವಾಗಿದೆ ಎಂದರು. ಆದಾಗ್ಯೂ ವಿಳಂಬವಾದರೂ ಮುಂದಿನ ಕೆಲವೇ ದಿನಗಳಲ್ಲಿ ಮಳೆ ಬರುವ ನಿರೀಕ್ಷೆ ಹೊಂದಲಾಗಿದೆ. ನಿರೀಕ್ಷೆಯಂತೆ ಮಳೆ ಬಂದಲ್ಲಿ ರೈತರ ಎಲ್ಲಾ ಸಮಸ್ಯೆಗಳಿಗೆ ಸಹಜವಾಗಿ ಪರಿಹಾರ ದೊರೆಯಲಿದೆ. ರೈತ ಮುಖಂಡರು ನೀಡಿದ ಸಲಹೆಯಂತೆ ಎಡದಂಡೆ ನಾಲೆಯಲ್ಲಿ ನೀರು ಹರಿಸುವುದನ್ನು ಇಂದಿನಿಂದಲೆ ನಿಲ್ಲಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು ಗಮನಹರಿಸಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...