ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನದ ಸಿಬ್ಬಂದಿ ಕರ್ತವ್ಯ ಲೋಪಕ್ಕೆ ಪ್ರಯಾಣಿಕರಿಗೆ ಶಿಕ್ಷೆ ಏಕೆ ಎಂದು ಡಿಜಿಸಿಎ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ವಿಮಾನದ ಪೈಲಟ್ ಗಳು, ಕ್ಯಾಬಿನ್ ಸಿಬ್ಬಂದಿ ಕರ್ತವ್ಯ ಲೋಪವಾಗಿದೆ. ಇವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನಯಾನ ಸಚಿವಾಲಯದ ನಿರ್ದೇಶಕರಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಸಹ ಪ್ರಯಾಣಿಕ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ. ಏರ್ ಇಂಡಿಯಾಗೆ ಡಿಜಿಸಿಎ ನಿರ್ದೇಶಕರು ನೋಟಿಸ್ ಜಾರಿ ಮಾಡಿ, ಪೈಲಟ್ ಗಳು ಮತ್ತು ಕ್ಯಾಬಿನ್ ಸಿಬ್ಬಂದಿಯಿಂದ ಕರ್ತವ್ಯ ಲೋಪವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನದಲ್ಲಿ ಅಶಿಸ್ತಿನ ಪ್ರಯಾಣಿಕರ ನಿರ್ಬಂಧಿಸಬೇಕಿತ್ತು. ಏರ್ ಇಂಡಿಯಾ ನಡವಳಿಕೆಗಳು ವೃತ್ತಿಪರವಾಗಿಲ್ಲ ಎಂದು ಡಿಜಿಸಿಎ ನಿರ್ದೇಶಕರು ನೋಟಿಸ್ ಜಾರಿ ಮಾಡಿದ್ದಾರೆ.