alex Certify ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಮುಂಬೈ: ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತ ಸಿಕ್ಕಿಬಿದ್ದ ಅಮೇರಿಕಾದ ಪ್ರಜೆ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್ 11 ರಂದು ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಬಾತ್ರೂಮ್‌ನಲ್ಲಿ ಧೂಮಪಾನ ಮಾಡಿದ್ದಲ್ಲದೇ ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು 37 ವರ್ಷದ ರಮಾಕಾಂತ್ ಎಂದು ಗುರುತಿಸಲಾಗಿದೆ. ಈತನನ್ನು ಯುಎಸ್ ಪ್ರಜೆ ಎಂದು ಗುರುತಿಸಲಾಗಿದೆ.

ವ್ಯಕ್ತಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದರು ಎಂದು ವಿಮಾನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ನಂತರ ಪ್ರಯಾಣಿಕನು ತಾನು ಕೆಲವು ಔಷಧಿಯನ್ನು ಹೊತ್ತೊಯ್ಯುತ್ತಿದ್ದೇನೆ ಎಂದು ಹೇಳಿದ್ದ. ಆದರೆ ಅವನ ಲಗೇಜ್ ಪರಿಶೀಲಿಸಿದಾಗ ಅಂತಹ ಯಾವುದೇ ವಸ್ತು ಪತ್ತೆಯಾಗಲಿಲ್ಲ.

ವಿಮಾನದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ ರಮಾಕಾಂತ್ ವಿರುದ್ಧ ಸಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಮದ್ಯಪಾನದ ಸ್ಥಿತಿಯಲ್ಲಿದ್ದರೇ ಅಥವಾ ಮಾನಸಿಕವಾಗಿ ತೊಂದರೆಗೀಡಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...