ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರು ಶಸ್ತ್ರಚಿಕಿತ್ಸೆಯ ನಂತರ ಅವರು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.
ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ಅವರಿಗೆ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ ಎಂದು ಹೇಳಲಾಗಿದೆ.
ಆಸ್ಪತ್ರೆಗೆ ದಾಖಲಾದ ಶಿವರಾಜ್ ಕುಮಾರ್ ಅವರಿಗೆ ಸಿಎಂ ಸಿದ್ಧರಾಮಯ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಮೊದಲು ಶಿವಣ್ಣ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದರು.