ವಾಷಿಂಗ್ಟನ್: ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಪ್ರಕಟವಾದ ತೊಡಗಿದ್ದು ಜೋ ಬೈಡೆನ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ 209 ಮತಗಳನ್ನು ಗಳಿಸಿದ್ದಾರೆ. ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರಿಗೆ 112 ಮತಗಳು ಬಂದಿವೆ. ಅಮೆರಿಕದ 50 ರಾಜ್ಯಗಳಲ್ಲಿ 538 ಜನಪ್ರತಿನಿಧಿಗಳಿದ್ದು, ಅಧ್ಯಕ್ಷರಾಗಲು 270 ಜನಪ್ರತಿನಿಧಿಗಳ ಬೆಂಬಲ ಬೇಕಿದೆ. ಜನಪ್ರತಿನಿಧಿಗಳನ್ನು ಎಲೆಕ್ಟೋರಲ್ ಎಂದು ಕರೆಯಲಾಗುತ್ತದೆ.
ಬೈಡೆನ್ 209 ಎಲೆಕ್ಟೋರಲ್ ಮತಗಳನ್ನು ಪಡೆದು ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಅಮೆರಿಕದ ಅಧ್ಯಕ್ಷ ಗಾದಿಯತ್ತ ದಾಪುಗಾಲು ಹಾಕಿದ್ದಾರೆ.