alex Certify BIG BREAKING: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಭಾರೀ ಹಿನ್ನಡೆ, 92 -122 ಲೀಡ್ ನಲ್ಲಿ ಬಿಡೆನ್ ಭರ್ಜರಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಭಾರೀ ಹಿನ್ನಡೆ, 92 -122 ಲೀಡ್ ನಲ್ಲಿ ಬಿಡೆನ್ ಭರ್ಜರಿ ಮುನ್ನಡೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮತದಾನ ಪೂರ್ಣಗೊಂಡಿದ್ದು ಮೊದಲ ಹಂತದ ಫಲಿತಾಂಶದಲ್ಲಿ ಹಾಲಿ ಅಧ್ಯಕ್ಷ ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹಿನ್ನಡೆ ಅನುಭವಿಸಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಜೋ ಬಿಡೆನ್ ಅವರು 122 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ 92 ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿದೆ.

ಜೋ ಬಿಡೆನ್ ಅವರು ಮೇರಿಲ್ಯಾಂಡ್, ಮಸ್ಸಚೂಸೆಟ್ಸ್, ನ್ಯೂಜೆರ್ಸಿ, ಕೊಲಂಬಿಯಾದಲ್ಲಿ ಭರ್ಜರಿ ಜಯಗಳಿಸಿದ್ದು, ಜಾರ್ಜಿಯಾ, ಫ್ಲೋರಿಡಾ, ಟೆಕ್ಸಾಸ್ ಮೊದಲಾದ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಸೌತ್ ಕರೋಲಿನಾ, ಕೆಂಟುಕಿ ಮೊದಲಾದ ಕಡೆಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...