
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಪದಗ್ರಹಣ ಸಮಾರಂಭಕ್ಕೂ ಮುನ್ನ ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಭೇಟಿಯಾದರು.
ಸೋಮವಾರ ಅಮೆರಿಕದ 47 ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಲು ನೀತಾ ಅಂಬಾನಿ, ಮುಕೇಶ್ ಅಂಬಾನಿ ವಾಷಿಂಗ್ಟನ್ ಗೆ ಆಗಮಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆಡಿ ವ್ಯಾನ್ಸ್ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಭಾರತದ ಅತ್ಯಂತ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅಂಬಾನಿ ದಂಪತಿಗಳನ್ನು ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಬಲಪಡಿಸಲು ಟ್ರಂಪ್ ಆಹ್ವಾನಿಸಿದ್ದಾರೆ. ಉದ್ಘಾಟನಾ ಸಮಾರಂಭಕ್ಕೂ ಮುನ್ನ, ಟ್ರಂಪ್ ನೀತಾ ಮತ್ತು ಮುಖೇಶ್ ಅಂಬಾನಿ ಅವರನ್ನು ಭೇಟಿಯಾಗಿದ್ದಾರೆ.