ಬೆಂಗಳೂರು: ನನ್ನ ಅಮೆರಿಕ ಪ್ರವಾಸ ಖಾಸಗಿಯಾಗಿದ್ದು ಯಾರನ್ನೂ ಭೇಟಿ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ಒಂದು ವಾರ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಒಂದು ವಾರದ ನನ್ನ ಅಮೆರಿಕ ಪ್ರವಾಸ ಖಾಸಗಿಯಾಗಿದೆ. ಅಮೆರಿಕ ಪ್ರವಾಸದಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಅಮೆರಿಕ ಪ್ರವಾಸದ ವೇಳೆ ಡಿ.ಕೆ. ಶಿವಕುಮಾರ್ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಕಮಲಾ ಹಾರಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ವರದಿ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕಟಣೆಯ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ವಿದೇಶ ಪ್ರವಾಸ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರವನ್ನು ಡಿ.ಕೆ. ಶಿವಕುಮಾರ್ ಬಿಡುಗಡೆ ಮಾಡಿದ್ದಾರೆ.