alex Certify ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಿ : ಇಲ್ಲದಿದ್ದರೆ ಪರವಾನಿಗೆ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಿ : ಇಲ್ಲದಿದ್ದರೆ ಪರವಾನಿಗೆ ರದ್ದು

ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ  ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ.

ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ಮೇಲ್ಭಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು.

ಮಾರ್ಚ್ 03 ರೊಳಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ, ಅಂಗಡಿಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಯಾವುದೇ ನಾಮಫಲಕಗಳು ಕಂಡುಬಂದಲ್ಲಿ ನಿಯಮಾನುಸಾರ ದಂಡವಿಧಿಸಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಹಾಗೂ ಉದ್ದಿಮೆಗಳ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ಅವರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...