ಬೆಂಗಳೂರು : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.
ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.