ಬೆಂಗಳೂರು : ಬೆಂಗಳೂರಲ್ಲಿ ಚಿರತೆ ಹಿಡಿಯಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ ಬೆಂಗಳೂರಿನ ಚಿರತೆ ನಾಗರಿಕರಲ್ಲಿ ಭಯ ಹುಟ್ಟಿಸಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಚಿರತೆ ಸೆರೆ ಹಿಡಿಯಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡಿದ್ದಾರೆ. ಡ್ರೋನ್ ಮೂಲಕ ಕಾರ್ಯಾಚರಣೆ ಮಾಡಲಾಗುತ್ತಿದೆ. ಥರ್ಮಲ್ ಕ್ಯಾಮರಾ ಮೂಲಕ ಸೆರೆ ಹಿಡಿಯಲಾಗುತ್ತಿದೆ ಎಂದರು. ಚಿರತೆ ಪ್ರತ್ಯಕ್ಷ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರಬೇಕು, ಆತಂಕ, ಭಯ ಬೇಡ ಎಂದರು.
ಬೆಂಗಳೂರಿನ ಕೂಡ್ಲುಗೇಟ್ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, . ಚಿರತೆ ಭಯದಲ್ಲೇ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಜನ ಓಡಾಡುತ್ತಿದ್ದಾರೆ. ಆನೇಕಲ್ನ ಕೂಡ್ಲು ಗೇಟ್ ಬಳಿ ಅ.29ರ ರಾತ್ರಿಯಿಂದ ಕಾಣಿಸಿಕೊಂಡಿರುವ ಚಿರತೆ, ಅ. 30ರಂದು ಒಂದು ಅಪಾರ್ಟ್ಮೆಂಟ್ನೊಳಕ್ಕೆ ನುಗ್ಗಿದೆ. ನಿನ್ನೆ ರಾತ್ರಿ ಕೂಡಾ ಕೂಡ್ಲು ಬಳಿಯ ಐಟಿ ಟೆಕ್ ಪಾರ್ಕ್ ಬಳಿ ಚಿರತೆ ಕಾಣಿಸಿಕೊಂಡಿದೆ.