alex Certify ಭೇದಿ ಸಮಸ್ಯೆ ನಿವಾರಿಸಿಕೊಳ್ಳಲು ಉಪಯೋಗಿಸಿ ಈ ‘ಮನೆ ಮದ್ದು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೇದಿ ಸಮಸ್ಯೆ ನಿವಾರಿಸಿಕೊಳ್ಳಲು ಉಪಯೋಗಿಸಿ ಈ ‘ಮನೆ ಮದ್ದು’

ತಿಂದ ಆಹಾರ ಸರಿಯಾಗಿ ಜೀರ್ಣವಾಗದೇ ಇರುವುದು, ಅಥವಾ ಕೆಲವೊಮ್ಮೆ ಹೊರಗಡೆ ಆಹಾರ ತಿನ್ನುವುದರಿಂದ ಅಜೀರ್ಣವಾಗಿ ಭೇದಿ ಶುರುವಾಗುತ್ತದೆ. ಇದರಿಂದ ಹೊಟ್ಟೆನೋವು ಕೂಡ ಕಾಣಿಸಿಕೊಳ್ಳುತ್ತದೆ. ಮಾತ್ರೆಗಳನ್ನು ತಿನ್ನುವ ಬದಲು ಮನೆಯಲ್ಲಿಯೇ ಇರುವ ಔಷಧಿಗಳನ್ನು ಉಪಯೋಗಿಸುವುದರಿಂದ ಇದನ್ನು ಕಡಿಮೆ ಮಾಡಿಕೊಳ್ಳಬಹುದು.

1 ಕಪ್ ಮೊಸರಿಗೆ 1 ಬಾಳೆಹಣ್ಣನ್ನು ಚಿಕ್ಕಚಿಕ್ಕದ್ದಾಗಿ ಕತ್ತರಿಸಿಕೊಂಡು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.

ಇನ್ನು ಒಂದು ಗ್ಲಾಸ್ ಮಜ್ಜಿಗೆಗೆ 1 ಟೀ ಸ್ಪೂನ್ ನಷ್ಟು ಮೆಂತೆ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ಭೇದಿ ನಿಯಂತ್ರಣಕ್ಕೆ ಬರುತ್ತದೆ.

ಒಂದು ಕಪ್ ಮೊಸರಿಗೆ ಮೆಂತೆ ಪುಡಿ 2 ಟೀ ಸ್ಪೂನ್, ಜೀರಿಗೆ ಪುಡಿ-2 ಟೀ ಸ್ಪೂನ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ತಿನ್ನಿ ಇದರಿಂದ ಭೇದಿ ಕಡಿಮೆಯಾಗುತ್ತದೆ.

½ ಟೀ ಸ್ಪೂನ್ ಸಾಸಿವೆ ಪುಡಿ, ½ ಟೀ ಸ್ಪೂನ್ ಜೀರಿಗೆ ಪುಡಿಗೆ 1 ಟೀ ಸ್ಪೂನ್ ಜೇನುತುಪ್ಪ ಸೇರಿಸಿ ತಿನ್ನಿ ಇದು ಕೂಡ ಭೇದಿಯನ್ನು ಶಮನ ಮಾಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...