ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಜುಲೈ 21 ರವರೆಗೆ ವಿಸ್ತರಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ.
ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆ ಜುಲೈ 14 ರವರೆಗೆ ವಿಧಾನ ಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಜುಲೈ 21ರ ವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.
ಜುಲೈ 5ರವರೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ನಡೆಯಲಿದೆ. ಜುಲೈ 6ರಂದು ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. ಜುಲೈ 7ರಂದು ಸಿಎಂ ಬಜೆಟ್ ಮಂಡಿಸಲಿದ್ದಾರೆ. ಜುಲೈ 10 ರಿಂದ 19 ರವರೆಗೆ ಬಜೆಟ್ ಮೇಲಿನ ಸಾಮಾನ್ಯ ಚರ್ಚೆ ನಡೆಯಲಿದ್ದು, ಚರ್ಚೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಿಎಂ ಜುಲೈ 20 ರಂದು ಉತ್ತರ ನೀಡುವರು. ಜುಲೈ 20, 21ರಂದು ಧನವಿನಿಯೋಗ ಹಾಗೂ ಹಣಕಾಸು ವಿಧೇಯಕಕ್ಕೆ ಅನುಮೋದನೆ ಪಡೆಯಲಾಗುವುದು.