ಡೆಹ್ರಾಡೂನ್: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಭಿಮತಾಲ್ ನಲ್ಲಿ ಈ ದುರಂತ ಸಂಭವಿಸಿದೆ. ಬಸ್ ಭಿಮತಾಲ್ ನಿಂದ ಹಲದ್ವಾನಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ ಡಿ ಆರ್ ಎಫ್ ತಂಡ, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.