
ಕಾರವಾರ: ಮುರ್ಕವಾಡ ಗ್ರಾಮದಲ್ಲಿ ಮನೆ ಗೋಡೆ ಕುಸಿದು ತಾಯಿ, ಮಗಳು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ದುರಂತ ಸಂಭವಿಸಿದೆ. ರುಕ್ಮಿಣಿ(37), ಶ್ರೀದೇವಿ(13) ಮೃತಪಟ್ಟವರು ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ತಹಶೀಲ್ದಾರ್, ಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.