ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಸೋಮವಾರ ಕೂಡ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಜು. 15 ರಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳು, ಕೊಡಗಿನಲ್ಲಿ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ.
ಉತ್ತರ ಕನ್ನಡದಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ, ಜೋಯಿಡಾ ತಾಲ್ಲೂಕಿನಲ್ಲಿ ರಜೆ ನೀಡಲಾಗಿದೆ. ಇಂದು ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.