ಬೆಂಗಳೂರು: ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಜು. 15 ರಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳು, ಕೊಡಗಿನಲ್ಲಿ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ. ಉತ್ತರ ಕನ್ನಡದಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ, ಜೋಯಿಡಾ ತಾಲ್ಲೂಕಿನಲ್ಲಿ ರಜೆ ನೀಡಿ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮುಂಜಾಗ್ರತೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.