ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದೇನೆ ಎಂದು ಘಟನೆಯ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಇಡೀ ದೇಶ ಉತ್ತರಾಖಂಡದ ರಾಜ್ಯದ ಜನರ ಜೊತೆಗೆ ಇದೆ. ಅಲ್ಲಿನ ಜನರ ಸುರಕ್ಷತೆಗಾಗಿ ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ, ನೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ಘಟನೆಯ ಕುರಿತಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.