alex Certify ಶಾಕಿಂಗ್…! ಮೇವು ತರಲು ಹೋದ ಹುಡುಗಿ ಎಳೆದೊಯ್ದು ಸಬ್ ಇನ್ಸ್ ಪೆಕ್ಟರ್ ಪುತ್ರರಿಂದ ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್…! ಮೇವು ತರಲು ಹೋದ ಹುಡುಗಿ ಎಳೆದೊಯ್ದು ಸಬ್ ಇನ್ಸ್ ಪೆಕ್ಟರ್ ಪುತ್ರರಿಂದ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಸಬ್ ಇನ್ಸ್ ಪೆಕ್ಟರ್ ಪುತ್ರರು ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಹೋದರರಾಗಿರುವ ಆರೋಪಿಗಳನ್ನು ದೀಪು ಯಾದವ್ ಮತ್ತು ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ಅವರ ಸ್ನೇಹಿತ ಗೋಲು ಯಾದವ್ ಕೂಡ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಕಾನ್ಪುರದ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಹೇಳಿದ್ದಾರೆ.

ದೀಪು ಯಾದವ್ ಮತ್ತು ಸೌರಭ್ ಯಾದವ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪುತ್ರರಾಗಿದ್ದಾರೆ. ಎಂಟನೇ ತರಗತಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆಯನ್ನು ಘಟಂಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಅಲ್ಲಿಂದ ಕಾನ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ದನಕರುಗಳಿಗೆ ಮೇವು ಸಂಗ್ರಹಿಸಲು ಹೊರಟಿದ್ದ ಬಾಲಕಿಯನ್ನು ಆರೋಪಿಗಳಲ್ಲಿ ಒಬ್ಬ ಅಪಹರಿಸಿ ಅಪರಿಚಿತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ. ಬಾಲಕಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಮರುದಿನ ಮನೆಗೆ ತಲುಪಿದ ಬಾಲಕಿ ಕುಟುಂಬ ಸದಸ್ಯರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಸಜೇತಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಗಳ ಬಂಧನಕ್ಕೆ 5 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...