alex Certify ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಲೈಂಗಿಕ ಸಂಬಂಧಕ್ಕೆ ಬ್ಲಾಕ್ ಮೇಲ್: ಯುವಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಲೈಂಗಿಕ ಸಂಬಂಧಕ್ಕೆ ಬ್ಲಾಕ್ ಮೇಲ್: ಯುವಕ ಅರೆಸ್ಟ್

ಉತ್ತರ ಪ್ರದೇಶದ ಭಾದೋಹಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ 22 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ವಿಡಿಯೋವನ್ನು ಆನ್‌ ಲೈನ್‌ ನಲ್ಲಿ ಅಪ್‌ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ 22 ವರ್ಷದ ವ್ಯಕ್ತಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಗರಾಜ್ ಜಿಲ್ಲೆಯ ಹಂಡಿಯಾ ನಿವಾಸಿ ರಾಹುಲ್ ಯಾದವ್ ವಿರುದ್ಧ ಶುಕ್ರವಾರ 20 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಲ್ಲಿನ ಜ್ಞಾನಪುರ-ಗೋಪಿಗಂಜ್ ಟ್ರೈ-ಸೆಕ್ಷನ್ ಬಳಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜ್ಞಾನಪುರ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ವಿನೋದ್ ಕುಮಾರ್ ತಿವಾರಿ ಮಾಹಿತಿ ನೀಡಿ, ಯಾದವ್ ತನ್ನ ಹಳ್ಳಿಯಲ್ಲಿ ವಾಸಿಸುವ ತನ್ನ ಅಣ್ಣನ ಅತ್ತೆಯನ್ನು ಭೇಟಿ ಮಾಡುವಾಗ ಮಹಿಳೆಯೊಂದಿಗೆ ಮಾತನಾಡುತ್ತಿದ್ದ. ಮಾರ್ಚ್ 3 ರಂದು ಆಕೆಯನ್ನು ಮೋಟಾರ್ ಸೈಕಲ್‌ ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ, ವಿಡಿಯೋ ಕೂಡ ಮಾಡಿದ್ದ. ವಿಡಿಯೋ ಬಳಸಿಕೊಂಡು ಮಾರ್ಚ್ 5 ರವರೆಗೆ ಹಲವಾರು ಬಾರಿ ಲೈಂಗಿಕ ಸಂಬಂಧ ಹೊಂದುವಂತೆ ಬ್ಲಾಕ್ ಮೇಲ್ ಮಾಡಿದ್ದ. ಶುಕ್ರವಾರ ಸಂಜೆ ಸಂತ್ರಸ್ತೆ ಸ್ವತಃ ಪೊಲೀಸರನ್ನು ಸಂಪರ್ಕಿಸಿ ಯಾದವ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...