alex Certify ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ ಒಂದು ಬದಿಯನ್ನು ಸೀಳಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಫಿಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ದೋಯಿ-ಉನ್ನಾವೋ ರಸ್ತೆಯ ಜಮಾಲ್ದಿಪುರ್ ಗ್ರಾಮದ ಬಳಿ ಭಾನುವಾರ ಅಪಘಾತ ಸಂಭವಿಸಿದೆ. ಸಫಿಪುರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಗಾಯಾಳುಗಳನ್ನು ಉನ್ನಾವೋ ಮತ್ತು ಕಾನ್ಪುರದ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಸರ್ಕಲ್ ಆಫೀಸರ್ ಸಫಿಪುರ್ ರಿಷಿಕಾಂತ್ ಶುಕ್ಲಾ, ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಗಾಯಗೊಂಡ 20 ಮಂದಿಯಲ್ಲಿ 11 ಮಂದಿಯನ್ನು ಕಾನ್ಪುರಕ್ಕೆ ಕಳುಹಿಸಲಾಗಿದ್ದು, 9 ಮಂದಿಯನ್ನು ಉನ್ನಾವೋದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಗಳಾಗಿರುವ ಕೆಲವು ಪ್ರಯಾಣಿಕರನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...