ಲಖ್ನೋ: ಉತ್ತರ ಪ್ರದೇಶದ ಲಖ್ನೋದಲ್ಲಿ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ನಂತರ ಎಂಟು ವರ್ಷದ ಬಾಲಕ ಸೇರಿದಂತೆ ಅವರ ಕುಟುಂಬದ ಐವರು ಗಂಭೀರ ಸುಟ್ಟ ಗಾಯಗಳಿಗೆ ಒಳಗಾಗಿದ್ದರೆ, ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.
ನಗರದ ‘ಬಕ್ಷಿ ಕಾ ತಲಾಬ್'(ಬಿಕೆಟಿ) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಎಂಟು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತರನ್ನು 30 ವರ್ಷದ ಜುಬೈರ್ ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಸಲ್ಮಾನ್(25), ಸೈಫ್(17), ಸಮರ್(8 ತಿಂಗಳು), ಶಬ್ನಮ್(35) ಮತ್ತು ಜಾಕಿರಾ(50) ಎಂದು ಗುರುತಿಸಲಾಗಿದೆ. ಅವರನ್ನು ಕೆಜಿಎಂಯು ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸಂತ್ರಸ್ತರನ್ನು ರಕ್ಷಿಸಿದ್ದಾರೆ. ಸ್ಫೋಟದಿಂದಾಗಿ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.